Ezekiel 47:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಇದನ್ನು ಸಬಂತ ಸಾಬಸ್ತ್ಯಕ್ಕಾಗಿ ವಿಂಗಡಿಸಙೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.
Kannada BSI Bible 2016
ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.
Kannada Bible (KNCL) BSI 2016
ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.