Ezekiel 47:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನ್ನನ್ನು ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಬರುವಂತೆ ಹೇಳಿದನು. ನೀರು ನನ್ನ ಪಾದ ಮುಳುಗುವಷ್ಟು ಆಳವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.
Kannada BSI Bible 2016
ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಮೂಡಲಿಗೆ ಮುಂದರಿದು ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.
Kannada Bible (KNCL) BSI 2016
ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.