Ezekiel 47:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು.
Kannada BSI Bible 2016
ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ನೀರು ಸೊಂಟದವರೆಗೆ ಇತ್ತು.
Kannada Bible (KNCL) BSI 2016
ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.