Ezekiel 47:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಘಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.
Kannada BSI Bible 2016
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು.
Kannada Bible (KNCL) BSI 2016
ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.