Ezekiel 47:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನನೊಐಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
Kannada BSI Bible 2016
ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನಗೆ ಹೀಗೆ ಹೇಳಿದನು - ಈ ಪ್ರವಾಹವು ಪೂರ್ವಪ್ರಾಂತ್ಯಕ್ಕೆ ಹೊರಟು ಅರಾಬಾ ಎಂಬ ತಗ್ಗಿಗೆ ಇಳಿದು ಲವಣಸಮುದ್ರದ ಕಡೆಗೆ ಹರಿಯುವದು; [ದೇವಸ್ಥಾನದಿಂದ] ಹೊರಟ ಪ್ರವಾಹವು ಲವಣ ಸಮುದ್ರಕ್ಕೆ [ಸೇರಲು] ಅದರ ನೀರು ಸಿಹಿಯಾಗುವದು.
Kannada Bible (KNCL) BSI 2016
ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.