Ezekiel 47:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
Kannada BSI Bible 2016
ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ತೊರೆಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿಬಾಳುವವು; ಮೀನುಗಳು ತಂಡೋಪತಂಡವಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು [ಆ ನೀರೂ] ಸಿಹಿಯಾಗುವದು; ಈ ತೊರೆಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವದು.
Kannada Bible (KNCL) BSI 2016
ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು.