Ezekiel 48:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.
Kannada BSI Bible 2016
ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು; ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲವಲ್ಲಾ.
Kannada Bible (KNCL) BSI 2016
ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.