Ezekiel 48:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.
Kannada BSI Bible 2016
ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ, ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು; [ಈ ಎರಡು ಪಾಲುಗಳ] ಒಟ್ಟಳತೆ ಎಷ್ಟಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ.
Kannada Bible (KNCL) BSI 2016
ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.