Ezekiel 48:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಘದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಘಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.
Kannada BSI Bible 2016
ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕ್ಷೇತ್ರವು ಯೆಹೋವನಿಗೆ ಮೀಸಲಾದದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಬದಲಾಬದಲಿ ಮಾಡಕೂಡದು, ದೇಶದ ಆ ಶ್ರೇಷ್ಠಾಂಶವು ಪರವಶವಾಗದಿರಲಿ.
Kannada Bible (KNCL) BSI 2016
ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.