Ezekiel 48:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.
Kannada BSI Bible 2016
ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲವು ಬಡಗಲಲ್ಲಿ ಇನ್ನೂರೈವತ್ತು ಮೊಳ, ತೆಂಕಲಲ್ಲಿ ಇನ್ನೂರೈವತ್ತು ಮೊಳ, ಮೂಡಲಲ್ಲಿ ಇನ್ನೂರೈವತ್ತು ಮೊಳ, ಪಡುವಲಲ್ಲಿ ಇನ್ನೂರೈವತ್ತು ಮೊಳ.
Kannada Bible (KNCL) BSI 2016
ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲ ಉತ್ತರದಲ್ಲಿ 125 ಮೀಟರ್, ದಕ್ಷಿಣದಲ್ಲಿ 125 ಮೀಟರ್, ಪೂರ್ವದಲ್ಲಿ 125 ಮೀಟರ್, ಪಶ್ಚಿಮದಲ್ಲಿ 125 ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್.