Ezekiel 48:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಈ ಸ್ಥಳವು ಭೂಪ್ರದೇಶದ ಪವಿತ್ರ ಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಬೆಳೆಗಳನ್ನು ಬೆಳೆಯಿಸುವುದಕ್ಕಾಗಿ ಈ ಸ್ಥಳವಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.
Kannada BSI Bible 2016
ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ವಿುಕ್ಕ ಭೂವಿುಯ ಉದ್ದವು ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಮೂಡಲ ಕಡೆ ಹತ್ತು ಸಾವಿರ ಮೊಳ, ಪಡುವಲ ಕಡೆ ಹತ್ತು ಸಾವಿರ ಮೊಳ; ಆ ಭೂವಿುಯು ಮೀಸಲಾದ ಪವಿತ್ರಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವದು; ಅದರ ಉತ್ಪತ್ತಿಯು ಅದನ್ನು ಗೆಯ್ಯುವ ಆ ಪುರನಿವಾಸಿಗಳಿಗೆ ಆಹಾರವಾಗುವದು.
Kannada Bible (KNCL) BSI 2016
ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ಮಿಕ್ಕ ಭೂಮಿಯ ಉದ್ದ ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆ ಐದು ಕಿಲೋಮೀಟರ್, ಪಶ್ಚಿಮದ ಕಡೆ ಐದು ಕಿಲೋಮೀಟರ್. ಆ ಭೂಮಿ ಮೀಸಲಾದ ಪವಿತ್ರ ಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವುದು; ಅದರ ಉತ್ಪತ್ತಿಯು ಅದನ್ನು ಕೃಷಿಮಾಡುವ ಆ ಪುರನಿವಾಸಿಗಳಿಗೆ ಆಹಾರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು.