Ezekiel 48:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೆರೀಬೋತ್‌ಕಾದೇಶ್ ಎಂಬ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.
Kannada BSI Bible 2016
ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದಿನ ತೆಂಕಣ ಸರಹದ್ದಿನಲ್ಲಿ ದೇಶದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್‍ಕಾದೇಶಿನ ಹಳ್ಳವನ್ನು ದಾಟಿ [ಐಗುಪ್ತದ ಮುಂದಣ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವದು.
Kannada Bible (KNCL) BSI 2016
ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.