Ezekiel 48:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಙೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸಾಬಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.
Kannada BSI Bible 2016
ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವದು; ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ, ಉದ್ದವು ಪಡುವಲಿಂದ ಮೂಡಲಿಗೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವದು.
Kannada Bible (KNCL) BSI 2016
ಜುದೇಯದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು; ಅದರ ಅಗಲ ಹನ್ನೆರಡುವರೆ ಕಿಲೋಮೀಟರ್, ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು.