Ezekiel 48:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಭೂಮಿಯನ್ನು ನೀವು ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಇದು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಇಪ್ಪತ್ತು ಸಾವಿರ ಮೊಳ ಅಗಲವಾಗಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.
Kannada BSI Bible 2016
ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು [ಮೀಸಲು ಭೂವಿುಯಲ್ಲಿ] ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಹತ್ತು ಸಾವಿರ ಮೊಳ.
Kannada Bible (KNCL) BSI 2016
ನೀವು ಮೀಸಲು ಭೂಮಿಯಲ್ಲಿ ಸರ್ವೇಶ್ವರನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಐದು ಕಿಲೋಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಯೆಹೋವ ದೇವರಿಗೆ ಅರ್ಪಿಸುವಂತಹ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು.