Ezekiel 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಊಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಘಹುದೂರದವರೆಗೆ ಘಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಘಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು. (Verses 1-2)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.
Kannada BSI Bible 2016
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಟ್ಟು ತ್ರಾಸನ್ನು ತಂದು ಅದರಿಂದ ಆ ಕೂದಲನ್ನು ಸರಿಯಾಗಿ ಮೂರು ಭಾಗ ಮಾಡು.
Kannada Bible (KNCL) BSI 2016
“ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.