Ezekiel 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಜನರು ಹಸಿವೆ ತಾಳಲಾರದೆ ತಮ್ಮ ಸಬಂತ ಮಕ್ಕಳನ್ನು ಕಬಳಿಸುವರು ಮತ್ತು ಮಕ್ಕಳು ತಮ್ಮ ತಂದೆತಾಯಿಗಳನ್ನೆ ತಿನ್ನುವರು. ಬೇರೆಬೇರೆ ರೀತಿಯಲ್ಲಿ ನಾನು ನಿಮ್ಮನ್ನು ಶಿಕ್ಷಿಸುವೆನು. ಜೀವದಿಂದುಳಿದವರನ್ನು ನಾನು ಗಾಳಿಗೆ ತೂರಿಬಿಡುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”
Kannada BSI Bible 2016
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.
Kannada Bible (KNCL) BSI 2016
ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.