Ezekiel 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತಬವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವಿ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.
Kannada BSI Bible 2016
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.
Kannada Bible (KNCL) BSI 2016
“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.