Ezekiel 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಘಹುದೂರದ ದೇಶಕ್ಕೆ ಅಟ್ಟಿಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada BSI Bible 2016
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada Bible (KNCL) BSI 2016
ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.