Ezekiel 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗಲೇ ನನ್ನ ಕೋಪವು ಶಮನವಾಗುವುದು. ನಾನು ಅವರ ವಿರುದ್ಧವಾಗಿ ನನ್ನ ಕೋಪವನ್ನು ಘಳಸಿ ತೃಪ್ತನಾಗುವೆನು. ನನ್ನ ಕೋಪವನ್ನು ಸುರಿದಾಗ ಯೆಹೋವನಾದ ನಾನೇ ಅವರೊಂದಿಗೆ ಕೋಪದಿಂದ ಮಾತಾಡಿದೆನೆಂದು ಅವರಿಗೆ ಗೊತ್ತಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
Kannada BSI Bible 2016
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.