Ezekiel 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
Kannada BSI Bible 2016
ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.
Kannada Bible (KNCL) BSI 2016
“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.