Ezekiel 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.
Kannada BSI Bible 2016
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.
Kannada Bible (KNCL) BSI 2016
ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”