Ezekiel 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
Kannada BSI Bible 2016
ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡಿಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.
Kannada Bible (KNCL) BSI 2016
ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.