Ezekiel 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
Kannada BSI Bible 2016
ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ಕೈಕೊಳ್ಳದೆ ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸದೆ ಆ ಜನಾಂಗಗಳಿಗಿಂತ ಹೆಚ್ಚು ದೊಂಬಿಮಾಡುವವರಾಗಿರುವದರಿಂದ [ಯೆರೂಸಲೇಮೇ,]
Kannada Bible (KNCL) BSI 2016
ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,