Ezekiel 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, ‘ಅಯ್ಯೋ, ಬೇಡ!” ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
Kannada BSI Bible 2016
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು - ಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ ಕ್ಷಾಮವ್ಯಾಧಿಗಳಿಂದ ಸತ್ತೇ ಸಾಯುವರು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ನುಡಿದದ್ದು: “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.