Ezekiel 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
Kannada BSI Bible 2016
ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.
Kannada Bible (KNCL) BSI 2016
ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.