Ezekiel 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಬೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ವೈರಿಯನ್ನು ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನ್ನತ ಸ್ಥಳಗಳನ್ನು ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
Kannada BSI Bible 2016
ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
Kannada Bible (KNCL) BSI 2016
‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.