Ezekiel 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಶಿಕ್ಷೆಯ ಸಮಯವು ಘಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
Kannada BSI Bible 2016
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
Kannada Bible (KNCL) BSI 2016
“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.