Ezekiel 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
Kannada BSI Bible 2016
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿಕ್ಷಾಮಗಳಿಗೆ ತುತ್ತಾಗುವರು.
Kannada Bible (KNCL) BSI 2016
“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.