Ezekiel 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
Kannada BSI Bible 2016
ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.
Kannada Bible (KNCL) BSI 2016
“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!