Ezekiel 7:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
Kannada BSI Bible 2016
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು.
Kannada Bible (KNCL) BSI 2016
ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.