Ezekiel 7:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದರ ಮೇಲೊಂದು ಆಪತ್ತು ಸಂಭವಿಸುವುದು. ಸುಳ್ಳುಸುದ್ದಿಗೊಂದು ಸುಳ್ಳುಸುದ್ದಿ ಸೇರಿಕೊಳ್ಳುವುದು. ಅವರು ಪ್ರವಾದಿಯಿಂದ ದರ್ಶನಕ್ಕಾಗಿ ಹುಡುಕುತ್ತಲೇ ಇರುವರು. ಆದರೆ ಯಾವ ದರ್ಶನಗಳೂ ಆಗುವದಿಲ್ಲ. ಜನರಿಗೆ ಉಪದೇಶಿಸಲು ಯಾಜಕರಲ್ಲಿ ಏನೂ ಇರುವುದಿಲ್ಲ. ಜನರಿಗೆ ಕೊಡಲು ಹಿರಿಯರಲ್ಲಿ ಯಾವ ಬುದ್ಧಿವಾದವೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
Kannada BSI Bible 2016
ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.
Kannada Bible (KNCL) BSI 2016
ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.