Ezekiel 7:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನು ಸಬಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನೆಐಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
Kannada BSI Bible 2016
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.
Kannada Bible (KNCL) BSI 2016
“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.