Ezekiel 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
Kannada BSI Bible 2016
ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
Kannada Bible (KNCL) BSI 2016
ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.