Ezekiel 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಊಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್ ” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
Kannada BSI Bible 2016
ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಯೆಹೋವನ ಆಲಯದ ಬಡಗಣ ಬಾಗಿಲ ಮುಂದಕ್ಕೆ ಕರತಂದನು; ಇಗೋ, ಅಲ್ಲಿ ಸ್ತ್ರೀಯರು ತಮ್ಮೂಜ್ ದೇವತೆಗೋಸ್ಕರ ಅಳುತ್ತಾ ಕೂತಿದ್ದರು.
Kannada Bible (KNCL) BSI 2016
ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು.