Ezekiel 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
Kannada BSI Bible 2016
ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
Kannada Bible (KNCL) BSI 2016
ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.