Ezekiel 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
Kannada BSI Bible 2016
ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;
Kannada Bible (KNCL) BSI 2016
ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.