Ezekiel 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
Kannada BSI Bible 2016
ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ನನಗೆ - ನರಪುತ್ರನೇ, ಬಡಗಲಿಗೆ ಕಣ್ಣೆತ್ತಿ ನೋಡು ಎಂದು ಹೇಳಿದನು; ಹಾಗೆ ನಾನು ಬಡಗಲಿಗೆ ಕಣ್ಣೆತ್ತಿ ನೋಡಲು ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವೇ ಯಜ್ಞವೇದಿಯ ಬಾಗಿಲ ಬಡಗಲಲ್ಲಿ ಬಾಗಿಲ ಮುಂದೆ ನಿಂತಿತ್ತು.
Kannada Bible (KNCL) BSI 2016
ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು.