Ezekiel 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಕೃತ್ಯಗಳನ್ನು ಹೋಗಿ ನೋಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
Kannada BSI Bible 2016
ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;
Kannada Bible (KNCL) BSI 2016
ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.