Ezekiel 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
Kannada BSI Bible 2016
ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
Kannada Bible (KNCL) BSI 2016
ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.