Ezekiel 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
Kannada BSI Bible 2016
ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
Kannada Bible (KNCL) BSI 2016
ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.