Ezekiel 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಜನರನ್ನು ಕೊಲ್ಲಲು ಹೊರಟಾಗ ನಾನೊಬ್ಬನೇ ಅಲ್ಲಿದ್ದೆನು. ನಾನು ಬಾಗಿ ನಮಸ್ಕರಿಸಿ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನೀನು ಜೆರುಸಲೇಮಿನ ಮೇಲೆ ನಿನ್ನ ಕೋಪವನ್ನು ಪ್ರದರ್ಶಿಸುವಾಗ ಉಳಿದ ಇಸ್ರೇಲರನ್ನು ನೀನು ನಿರ್ಮೂಲ ಮಾಡುವೆ!” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.
Kannada BSI Bible 2016
ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇವಿುನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು ಇಸ್ರಾಯೇಲಿನ ಶೇಷವನ್ನೆಲ್ಲಾ ನಾಶಮಾಡುವಿಯಾ ಎಂದು ಮೊರೆಯಿಡಲು
Kannada Bible (KNCL) BSI 2016
ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.