Ezra 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
Kannada BSI Bible 2016
ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
Kannada Bible (KNCL) BSI 2016
ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.