Ezra 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
Kannada BSI Bible 2016
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
Kannada Bible (KNCL) BSI 2016
ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.