Ezra 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
Kannada BSI Bible 2016
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!