Ezra 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.
Kannada BSI Bible 2016
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು.
Kannada Bible (KNCL) BSI 2016
ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”