Ezra 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
Kannada BSI Bible 2016
ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.
Kannada Bible (KNCL) BSI 2016
ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.