Ezra 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.
Kannada BSI Bible 2016
ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.
Kannada Bible (KNCL) BSI 2016
ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು. ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.