Ezra 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
Kannada BSI Bible 2016
ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.