Ezra 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರ್ಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲಿಗೆ ಸೆರೆಯೊಯ್ಯಲ್ಪಟ್ಟವರಲ್ಲಿ
Kannada Bible (KNCL) BSI 2016
ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ