Ezra 2:68 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
Kannada BSI Bible 2016
ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇವಿುನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟುವದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
Kannada Bible (KNCL) BSI 2016
ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.